ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ರಕ್ಷಕರಿಗೆ ತರಬೇತಿ ಶಿಬಿರ

0

ಪುತ್ತೂರು: ಶಿಕ್ಷಣ ಮತ್ತು ಸಂಸ್ಕಾರ ಎರಡನ್ನೂ ನೀಡುವಲ್ಲಿ ರಕ್ಷಕರು ಗಮನ ಹರಿಸಿದರೆ ಮಾತ್ರ ಮಕ್ಕಳು ಯಶಸ್ಸಿನ ಗುರಿ ತಲುಪಲು ಸಾಧ್ಯ ಎಂದು ತರಬೇತುದಾರ ರಫೀಕ್ ಮಾಸ್ಟರ್ ಆತೂರು ಹೇಳಿದರು. ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ `ಡಿಸೈರ್’ ಹೆಸರಿನಲ್ಲಿ ನಡೆದ ಹೆತ್ತವರ ತರಬೇತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.


ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ ಮಾತನಾಡಿ ಆಡಳಿತ ಸಮಿತಿಯು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವಿರತ ಶ್ರಮವಹಿಸುತ್ತಿದ್ದು ಹೆತ್ತವರು ಶಿಕ್ಷಕರ ಮತ್ತು ಸಂಸ್ಥೆಯ ಜೊತೆ ಉತ್ತಮ ಬಾಂಧವ್ಯ ಬೆಳೆಸಿ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.


ಮ್ಯಾನೇಜರ್ ಉಮರ್ ಅಮ್ಜದಿ ಕುಕ್ಕಿಲ ಹಾಗೂ ಪ್ರಾಂಶುಪಾಲೆ ಸಂಧ್ಯಾ ಪಿ. ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಆಡಳಿತ ಸಮಿತಿ ಸದಸ್ಯ ಯೂಸುಫ್ ಸಾಜ, ಪದವಿ ಕಾಲೇಜು ಪ್ರಾಂಶುಪಾಲ ಮುಹಮ್ಮದ್ ಮನ್ಸೂರ್, ಅಧ್ಯಾಪಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ಎಸ್‌ಪಿ ಹಂಝ ಸಖಾಫಿ ಉದ್ಘಾಟಿಸಿದರು. ಪ್ರಾಂಶುಪಾಲೆ ಸಂಧ್ಯಾ ಪಿ. ಶೆಟ್ಟಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here