ಪುತ್ತೂರು/ಮಂಗಳೂರು: 2024ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ.
ಆಂಧ್ರಪ್ರದೇಶಕ್ಕೆ ಡಿ ಪುರಂದೇಶ್ವರಿ, ತೆಲಂಗಾಣಕ್ಕೆ ಕಿಶನ್ ರೆಡ್ಡಿ, ಪಂಜಾಬ್ ಗೆ ಸುನಿಲ್ ಜಾಖರ್ ಹಾಗೂ ಜಾರ್ಖಂಡ್ ಬಾಬುಲಾಲ್ ಮುರಂಡಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ನಾಲ್ಕು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.
ಆದರೆ ಕರ್ನಾಟಕಕ್ಕೆ ಮಾತ್ರ ನೂತನ ರಾಜ್ಯಾಧ್ಯಕ್ಷರನ್ನು ಬಿಜೆಪಿ ಇನ್ನೂ ಘೋಷಣೆ ಮಾಡಿಲ್ಲ. ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದೆ.