ಪುತ್ತೂರು: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ರಕ್ಷಕ -ಶಿಕ್ಷಕ ಸಂಘದ ಮಹಾಸಭೆಯು ಶಾಲೆಯ ಸಭಾಂಗಣದಲ್ಲಿ ಜು.1ರಂದು ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಮಾಲಿನಿ ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಮರ್ಥವಾಗಿ ಸವಾಲುಗಳನ್ನು ಎದುರಿಸುವಲ್ಲಿ ಶಿಕ್ಷಣದ ಜೊತೆಗೆ ಹೆತ್ತವರ, ಶಿಕ್ಷಕರ ಮಾರ್ಗದರ್ಶನವು ಅತ್ಯಗತ್ಯ ಎಂದರು.
ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತ “ವಿದ್ಯಾರ್ಥಿ ತಮ್ಮ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು” ಎಂದರು .
2022 -23ನೇ ಶೈಕ್ಷಣಿಕ ಸಾಲಿನ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ಜಗದೀಶ್ ಮಾತನಾಡಿ “ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಆಹಾರ ಪದ್ಧತಿಯನ್ನು ಬೆಳೆಸಬೇಕು” ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕ ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ “ಪ್ರತೀ ವಿದ್ಯಾರ್ಥಿಯನ್ನು ಸಮಾಜದ ಉತ್ತಮ ಪ್ರಜೆಯನ್ನಾಗಿ ರೂಪಿಸುವುದು ಪೋಷಕರ ಹಾಗೂ ಶಿಕ್ಷಕರ ಆದ್ಯ ಕರ್ತವ್ಯ.ಹಾಗಾಗಿ ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣವು ಸಿಗಬೇಕು “ಎಂದರು .
ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೋರಾ ಪಾಯ್ಸ್ಪೋಷಕರಿಗೆ ಶಾಲೆಯ ಬಗ್ಗೆ ಅಗತ್ಯ ಮಾಹಿತಿ ಮತ್ತು ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಶಾಲಾ ಮಂತ್ರಿಮಂಡಲದ ನಾಯಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 2023-24ನೇ ಶೈಕ್ಷಣಿಕ ಸಾಲಿನ ರಕ್ಷಕ -ಶಿಕ್ಷಕ ಸಂಘದ ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ವಿವೇಕ್ ಆಳ್ವಾ,ಸಹ ಕಾರ್ಯದರ್ಶಿಗಳಾಗಿ ನಯನಾ ರೈ ಆಯ್ಕೆಯಾದರು.
ರೀನಾ ಸೆರಾವೊ ವಾರ್ಷಿಕ ವರದಿಯನ್ನು ವಾಚಿಸಿದರು. ಮರಿಯ ಪ್ರಿಯ ಮೆಂಡೋನ್ಸಾ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಜ್ಯೋತಿಪ್ರಿಯ ಸ್ವಾಗತಿಸಿ , ಸುನಿತಾ ಸಿಲ್ವಾ ವಂದಿಸಿದರು. ಸರಿತಾ ಪ್ರಿಯ ಗೊನ್ಸಾಲ್ವಿಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.