ಪುತ್ತೂರು ನಗರ, ಮಹಿಳಾ, ವಿಟ್ಲ, ಸುಳ್ಯ, ಬೆಳ್ಳಾರೆ, ಬಂಟ್ವಾಳ ಪೊಲೀಸ್ ಠಾಣೆಗಳ ಎಸ್.ಐಗಳ ವರ್ಗಾವಣೆ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ, ವಿಟ್ಲ, ಸುಳ್ಯ, ಬಂಟ್ವಾಳ ಸಹಿತ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಸರಸ್ವತಿ ಬಿ.ಟಿ.ಅವರನ್ನು ಸುಳ್ಯಕ್ಕೆ, ಮಹಿಳಾ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಕೆ.ಎಸ್ ಅವರನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ, ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ, ಸುಳ್ಯದ ರತ್ನ ಕುಮಾರ್ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ, ಬೆಳ್ಳಾರೆ ಪೊಲೀಸ್ ಠಾಣೆಯ ಎಸ್.ಐ ಶಿವಕುಮಾರ್ ಅವರನ್ನು ಮುರುಡೇಶ್ವರಕ್ಕೆ, ಬಂಟ್ವಾಳ ಪೊಲೀಸ್ ಠಾಣೆಯ ಧನರಾಜ್ ಅವರನ್ನು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ಷಯ ಡವಗಿ ಅವರನ್ನು ಕಡಬ ಪೊಲೀಸ್ ಠಾಣೆಗೆ, ಬಂಟ್ವಾಳದ ಸಂಜೀವ ಕೆ ಅವರನ್ನು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ, ಬಂಟ್ವಾಳದ ಮೂರ್ತಿ ಅವರನ್ನು ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾಣೆಗೊಳಿಸಿ ಪಶ್ಚಿಮ ವಲಯ ಪೊಲಿಸ್ ಉಪ ಮಹಾನಿರೀಕ್ಷಕ ಡಾ.ಚಂದ್ರಗುಪ್ತ ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here