ಪುತ್ತೂರು:ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
2022ರಲ್ಲಿ ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡಿನ ರಾಜೀವ್ ಗಾಂಧಿ ನಗರದ ಅಬ್ದುಲ್ ನಿಸಾರ್(21ವ)ಎಂಬಾತನನ್ನು ಬಂಧಿಸಲಾಗಿತ್ತು.ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಆರೋಪಿಯು ಬಳಿಕ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ವಾರಂಟ್ ಜಾರಿಯಾಗಿತ್ತು.ಆರೋಪಿ ಅಬ್ದುಲ್ ನಿಸಾರ್ರನ್ನು ಜು.4ರಂದು ಕಾಸರಗೋಡು ಕುಂಬಳೆಯಲ್ಲಿ ಸಂಪ್ಯ ಪೊಲೀಸರು ಬಂಧಿಸಿ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.