ಬನ್ನೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವ, ಇನ್ನರ್ ವೀಲ್ ಕ್ಲಬ್ ಪುತ್ತೂರು, ಸರಕಾರಿ ಪ್ರಾಥಮಿಕ ಶಾಲೆ ಬನ್ನೂರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ, ಸ್ಪೂರ್ತಿ ಯುವ ಸಂಸ್ಥೆ (ರಿ) ಬನ್ನೂರು, ಮತ್ತು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ
ಇವರ ಸಂಯುಕ್ತ ಆಶ್ರಯದಲ್ಲಿ ಬನ್ನೂರು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ “ಗಿಡ ನೆಡುವ ಕಾರ್ಯಕ್ರಮ” ಜರಗಿತು.
ಪುತ್ತೂರು ನಗರಸಭೆಯ ಸದಸ್ಯೆ ಗೌರಿ ಬನ್ನೂರು ಚಾಲನೆ ನೀಡಿದರು. ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿವಿ, ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷ ಪಶುಪತಿ ಶರ್ಮ, ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ಕುಸುಮಾಧರ್, ಸ್ಫೂರ್ತಿ ಯುವ ಸಂಸ್ಥೆಯ ದಿನೇಶ್ ಸಾಲಿಯಾನ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಗುರು ಪ್ರಸಾದ್, ಶಿಕ್ಷಕರಾದ ಕೋಟಿಯಪ್ಪ ಪೂಜಾರಿ, ಮುಖ್ಯ ಶಿಕ್ಷಕರಾದ ರಾಮಚಂದ್ರ, ಶಿಕ್ಷಕ ಅಶ್ರಪ್ , ಅರಣ್ಯ ಇಲಾಖೆ ಸಿಬ್ಬಂದಿ ಶಿವಾನಂದ ಆಚಾರ್ಯ, ರೋಟರಿ ಸೆಂಟ್ರಲ್ ನಿರ್ದೇಶಕರಾದ ರಾಕೇಶ್ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಸೆಂಟ್ರಲ್ ಅಧ್ಯಕ್ಷರಾದ ಡಾ ರಾಜೇಶ್ ಬೆಜ್ಜಂಗಳ ಸ್ವಾಗತಿಸಿ, ಪೂರ್ವಾಧ್ಯಕ್ಷ ರಫೀಕ್ ದರ್ಭೆ ವಂದಿಸಿದರು.