ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ‘ಅನ್ನಪೂರ್ಣಾ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ ಲೋಕಾರ್ಪಣೆ-ವಾಸ್ತುಪೂಜೆ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ತೆಂಕಿಲ ವಿವೇಕನಗರದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ‘ಅನ್ನಪೂರ್ಣ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ ಇದರ ಲೋಕಾರ್ಪಣೆ ಸಲುವಾಗಿ ಜು.5 ರಂದು ಸಂಜೆ ವಾಸ್ತುಪೂಜೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್‌ರವರ ನೇತೃತ್ವದಲ್ಲಿ ವಾಸ್ತು ಪೂಜೆ ನಡೆಯಿತು. ಬೆಂಗಳೂರು ಬಯೋಟೆಕ್ ಕಂಪೆನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕರಾಗಿರುವ ಡಾ.ಶಾಮ ಭಟ್ಟ, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಚುತ ನಾಯಕ್ ಹೆಚ್.ರವರು ಉಪಸ್ಥಿತರಿದ್ದರು.

ಸನ್ಮಾನ:
ಕಾರ್ಯಕ್ರಮದಲ್ಲಿ ಬೆಂಗಳೂರು ಬಯೋಟೆಕ್ ಕಂಪೆನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕರಾಗಿರುವ ಡಾ.ಶಾಮ ಭಟ್ಟ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ಚಂದ್ರ ನಾಯಕ್, ಕೋಶಾಧಿಕಾರಿ ಅಶೋಕ್ ಕುಂಬ್ಳೆ, ಶಾಲಾ ಅನ್ನಪೂರ್ಣ ಯೋಜನಾ ಸಮಿತಿ ಕಾರ್ಯದರ್ಶಿ ಶ್ರೀಹರಿ, ಪ್ರೌಢಶಾಲಾ ವಿಭಾಗದ ಮುಖ್ಯಗುರು ಆಶಾ ಬೆಳ್ಳಾರೆ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ನಳಿನಿ ವಾಗ್ಲೆ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಆಡಳಿತ ಮಂಡಳಿ ಸಂಚಾಲಕ ವಸಂತ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ಅನ್ನಪೂರ್ಣ ಯೋಜನಾ ಸಮಿತಿ ಅಧ್ಯಕ್ಷ ಸುಹಾಸ್ ಮಜಿ ವಂದಿಸಿದರು. ಮಾತಾಜಿ ಉಮಾ ಮೋಹನ್ ಕಾರ್ಯಕ್ರಮ ನಿರೂಪಿಸಿದರು.

ಇಂದು ಗಣಪತಿ ಹೋಮ, ಸಾನ್ನಿಧ್ಯ ಪ್ರವೇಶ
‘ಅನ್ನಪೂರ್ಣ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ ಇದರ ಲೋಕಾರ್ಪಣೆ ಸಲುವಾಗಿ ಗಣಪತಿ ಹೋಮ ಜು.6 ರಂದು ಬೆಳಿಗ್ಗೆ ಜರುಗಲಿದೆ. ಆನಂದ ಸೇವಾಶ್ರಮ ಟ್ರಸ್ಟ್‌ನ ಅಧ್ಯಕ್ಷೆ ಡಾ. ಪಿ.ಗೌರಿ ಪೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ.ಕೃಷ್ಣ ಭಟ್, ನಿರ್ದೇಶಕಿ ಡಾ. ಸುಧಾ ಎಸ್ ರಾವ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here