ಗುಂಡ್ಯ: ಕಂಟೈನರ್ ಲಾರಿ, ಕಾರು ಡಿಕ್ಕಿ-ಪ್ರಯಾಣಿಕರಿಗೆ ಗಾಯ

0

ನೆಲ್ಯಾಡಿ: ಕಂಟೈನರ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜು.5ರಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here