ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ-ಮಂಗಳೂರು ರಸ್ತೆಯ ವೀರಕಂಭ ಸಮೀಪ ಗುಡ್ಡವೊಂದು ರಸ್ತೆಗೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ವೀರಕಂಭ ಶಾಲೆ ಸಮೀಪ ಇರುವ ಗುಡ್ಡ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಡಿ.ಎಸ್.ಕೂಡಲಗಿರವರ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.