ತಿಂಗಳ 3ನೇ ಶನಿವಾರ ‘ಬ್ಯಾಗ್ ರಹಿತ ದಿನ/ ಸಂಭ್ರಮ ಶನಿವಾರ’ ; ಶಿಕ್ಷಣ ಇಲಾಖೆ ಸೂಚನೆ

0

ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ತಿಂಗಳಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ಪ್ರತಿ ತಿಂಗಳ 3ನೇ ಶನಿವಾರ ಬ್ಯಾಗ್ ರಹಿತ ದಿನ' ಅಥವಾಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯಲ್ಲೇನಿದೆ?: ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಈಗಾಗಲೇ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ಬ್ಲಾಕ್ ಹಾಗೂ ಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ಸಭೆಗಳಲ್ಲಿ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡಬೇಕು.

ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು DSERT ವೆಬ್ ಸೈಟ್‌ನಲ್ಲಿ lips/dsarkarnataka.nic.in ಅಪ್ಲೋಡ್ ಮಾಡಿದ್ದು, ಸದರಿ ಕಲಿಕಾ ಸಾಮಗ್ರಿಗಳನ್ನು ಉಪಯೋಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರಿಗೆ ಮಾಹಿತಿ ಒದಗಿಸಬೇಕು.ಸಂಭ್ರಮ ಶನಿವಾರ' ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ CRP ಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 2023-24 ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಢೀಕೃತ ವರದಿಯನ್ನು ಮಾಹೆವಾರು ಸಿದ್ಧಪಡಿಸಿ DSEEHT ಕಚೇರಿಯ ಇ.ವಿ.ಜಿ ಶಾಖೆಯ evgardserthegmail.com ಮೇಲ್‌ಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here