ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

0

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.
ವಿಟ್ಲ ಮೇಗಿನಪೇಟೆ ನಿವಾಸಿ ಗುರುವಪ್ಪರವರ ಪುತ್ರ, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (30ವ) ಅವರು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಪ್ರಶಾಂತ್‌ರವರು ಜು.7ರಂದು ಸಾಯಂಕಾಲದ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯೊಳಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯರು ಬಂದು ನೋಡಿದಾಗ ಮನೆಯೊಳಗಡೆ ಪ್ರಶಾಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಜರು ನಡೆಸಲಾಗಿದೆ. ಮೃತರು ವಿವಾಹಿತರಾಗಿದ್ದು, ಕೆಲಸಮಯಗಳ ಹಿಂದೆ ಪತ್ನಿ ಅವರನ್ನು ತೊರೆದಿದ್ದರೆನ್ನಲಾಗಿದೆ. ಪ್ರಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ, ಆತ್ಮಹತ್ಯೆಗೆ ಕೌಟುಂಬಿಕ ಮನಸ್ತಾಪವೇ ಕಾರಣ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತರ ಸಹೋದರಿ, ಪುತ್ತೂರು ಕಸಬ ಗ್ರಾಮದ ಬಪ್ಪಳಿಗೆ ನಿವಾಸಿ ವೆಂಕಟೇಶ್‌ ಅವರ ಪತ್ನಿ ಪ್ರಮೀಳಾರವರು ಪೊಲೀಸರಿಗೆ ದೂರು ನೀಡಿದ್ದು, ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here