ನಂದಾವರ ಗುಂಪು ಮನೆಯಲ್ಲಿ ನಡೆದ ಗುಡ್ಡಕುಸಿತ ಪ್ರಕರಣ-ಗಾಯಾಳು ಸಫಾರವರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಂಟ್ವಾಳ ಶಾಸಕರು

0

ವಿಟ್ಲ: ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ಗುಂಪು ಮನೆಯೊಂದಕ್ಕೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಘಟನೆಯ ವೇಳೆ ಸಫಾರವರ ತಾಯಿ ಝರೀನಾರವರು ಮೃತಪಟ್ಟಿದ್ದರು.ಘಟನೆ ಬಗ್ಗೆ ಮಾಹಿತಿ ಪಡೆದ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು. ಸರಕಾರದಿಂದ ಸಿಗಬೇಕಾದ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.
ಘಟನೆ ನಡೆದ ಸಂದರ್ಭದಲ್ಲಿ ಶಾಸಕರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಜು.8ರಂದು ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here