ಜು.9: ಒಡಿಯೂರು ಶ್ರೀಗಳವರ ಜನ್ಮದಿನೋತ್ಸವದ ಪ್ರಯುಕ್ತ ’ಕೆಸರ್‌ದ ಕಂಡೊಡೊಂಜಿ ದಿನ’

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ – ಗ್ರಾಮೋತ್ಸವ 2023ರ ಪ್ರಯಕ್ತ ಜು.9ರಂದು ಶ್ರೀ ಸಂಸ್ಥಾನದ ಸಾಗುವಳಿ ಭೂಮಿ ಬನಾರಿಯಲ್ಲಿ ’ಕೆಸರ್‌ದ ಕಂಡೊಡೊಂಜಿ ದಿನ’ ಕಾರ್ಯಕ್ರಮ ನಡೆಯಲಿದೆ. 

ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು  ಗದ್ದೆಗೆ ಹಾಲು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾಧ್ವಿ  ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಆಟೋಟ ಸ್ಪರ್ಧೆಗಳು ನಡೆಯಲಿದೆ.

LEAVE A REPLY

Please enter your comment!
Please enter your name here