ಶಾಂತಿಗೋಡು: ಬಾರೀ ಮಳೆಯಿಂದಾಗಿ ಶಾಂತಿಗೋಡು-ಆನಡ್ಕ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು ವಾಹನ ಸಂಚಾರಕ್ಕೆ ಮತ್ತು ಜನ ಸಂಚಾರಕ್ಕೆ ತೊಂದರೆಯಾಗಿದೆ. ಮಣ್ಣು ಕುಸಿದು ಬಿದ್ದುದರಿಂದ ಚರಂಡಿಯಲ್ಲಿ ಸರಾಗವಾಗಿ ನೀರು ಹರಿವುದಕ್ಕೂ ಸಮಸ್ಯೆಯಾಗಿದೆ. ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.