ವಿಟ್ಲ: ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪಂ. ವ್ಯಾಪ್ತಿಯ ನಂದಾವರ ಗುಂಪು ಮನೆಯೊಂದಕ್ಕೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾ ಅವರನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
