ಬೆಂಗಳೂರು: ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜು.10ರಂದು ಸಂಜೆ ಚಾಲನೆ ನೀಡಲಿದ್ದಾರೆ.15 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ. ಸಚಿವರ ಪ್ರಕಾರ ರಾಜ್ಯದಲ್ಲಿ 4 ಸದಸ್ಯರನ್ನೊಳಗೊಂಡ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳಿದ್ದು ಒಟ್ಟು ೪೧ ಕೋಟಿ ಫಲಾನುಭವಿಗಳಿದ್ದಾರೆ.ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆ.ಜಿ. ಅಕ್ಕಿ ಕೊಡುವುದು ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಪೈಕಿ ಒಂದಾಗಿತ್ತು.