ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿದೆ-ಡಾ| ಎಂ.ಎನ್.ರಾಜೇಂದ್ರ ಕುಮಾರ್

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ತನ್ನ 111 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಗ್ರಾಹಕರಿಗೆ ಉತ್ಕ್ತ್ರಷ್ಟ ಸೇವೆಯನ್ನು ನೀಡುತ್ತಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಬ್ಯಾಂಕ್ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಶಾಖಾ ಮಟ್ಟದಲ್ಲಿ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಸ್ಪಂದಿಸಿರುವುದರಿಂದ ಬ್ಯಾಂಕಿಗೆ ಸತತ ಎರಡು ವರ್ಷಗಳಿಂದ (2021-22, 2022-23)’ ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ. ಈ ಪ್ರತಿಷ್ಠಿತ ಪ್ರಶಸ್ತಿ ಬ್ಯಾಂಕಿನ ಘನತೆಯನ್ನು ಮತ್ತಷ್ಟು ಹೆಚ್ಚಿಸಿದ್ದು ಮಾತ್ರವಲ್ಲ ರಾಷ್ಟ್ರೀಕತ ಬ್ಯಾಂಕ್ ಗಳಿಗಿಂತ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.


ಬ್ಯಾಂಕಿನ ಸಿಬ್ಬಂದಿಗಳಿಗೆ ಗಿಫ್ಟ್ ಕೂಪನ್ ವಿತರಣೆ ಹಾಗೂ ಶಾಖಾ ಮಟ್ಟದಲ್ಲಿ ಸಮಗ್ರ ಸಾಧನೆಗೈದ ಸಿಬ್ಬಂದಿಗಳನ್ನು ಪುರಸ್ಕರಿಸುವ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿ ಬ್ಯಾಂಕಿನ ಅಭಿವದ್ಧಿಗೆ ಶ್ರಮಿಸಬೇಕು. ಗ್ರಾಹಕರ ಅನುಕೂಲಕ್ಕಾಗಿ ವಿವಿಧ ರೀತಿಯ ಸಾಲ ಸೌಲಭ್ಯ, ಆಕರ್ಷಕ ಬಡ್ಡಿದರದ ಠೇವಣಿ, ಲಾಕರ್ ಸೌಲಭ್ಯ, ಕೋರ್ ಬ್ಯಾಂಕಿಂಗ್ ಸೌಲಭ್ಯ ಬ್ಯಾಂಕ್‌ನಲ್ಲಿ ದೊರೆಯುತ್ತಿದೆ. ಬ್ಯಾಂಕಿನ ವಿವಿಧ ಯೋಜನೆಗಳ ಸಮರ್ಪಕ ಮಾಹಿತಿಯನ್ನು ಗ್ರಾಹಕರಿಗೆ ಸಿಬ್ಬಂದಿಗಳು ನೀಡಬೇಕು. ಇದರಿಂದ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಬೆಳೆಯುತ್ತದೆ . ಇದು ಬ್ಯಾಂಕಿನ ಪ್ರಗತಿಗೆ ಪೂರಕವಾಗಿದೆ ಎಂದು ಡಾ| ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.


ಬ್ಯಾಂಕಿನ 811 ಸಿಬ್ಬಂದಿಗಳ ಪರವಾಗಿ ಮುಖ್ಯಕಾರ್ಯನಿರ್ವಹಣಾಕಾರಿ ಗೋಪಾಲಕಷ್ಣ ಭಟ್, ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಯೋಜನೆ ಹಾಗೂ ಶಾಖಾ ನಿಯಂತ್ರಣ ವಿಭಾಗದ ಅಧಿಕಾರಿ ರಾಜೇಶ್ ಶೆಟ್ಟಿ ಇವರು ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರಿಂದ ರೂ. 10,000/- ಮೌಲ್ಯದ ಗಿಫ್ಟ್ ಕೂಪನ್ ಸ್ವೀಕರಿಸಿದರು.
ದುಬೈಯಲ್ಲಿ ಅಂತರ್ರಾಷ್ಟ್ರೀಯ ಅಚೀವರ್ಸ್ ಸಾಧಕ ಪ್ರಶಸ್ತಿ ಪಡೆದ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಬ್ಯಾಂಕಿನ ನೌಕರರ ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.


2022-23ನೇ ಸಾಲಿನಲ್ಲಿ ಬ್ಯಾಂಕ್ ನೀಡಿದ ಗುರಿಯನ್ನು ಸಾಧಿಸಿದ ಶಾಖಾ ವ್ಯವಸ್ಥಾಪಕರನ್ನು , ತಾಲೂಕು ಮಟ್ಟದಲ್ಲಿ ಸಮಗ್ರ ಸಾಧನೆಗೈದ ಸಿಬ್ಬಂದಿಗಳನ್ನು ಹಾಗೂ ಎಪಿವೈ ಯೋಜನೆಯಲ್ಲಿ ಗುರಿ ಸಾಧಿಸಿದ ಶಾಖಾ ವ್ಯವಸ್ಥಾಪಕರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.


ಬ್ಯಾಂಕಿನ ಸಿಬ್ಬಂದಿಗಳ ಪರವಾಗಿ ನೌಕರರ ಒಕ್ಕೂಟದ ಅಧ್ಯಕ್ಷ ರಾಜೇಶ್ ಶೆಟ್ಟಿ, ಸಿದ್ದಾಪುರ ಶಾಖೆಯ ವ್ಯವಸ್ಥಾಪಕ ಪ್ರವೀಣ್, ಕೊಕ್ಕಡ ಶಾಖೆಯ ಸಿಬ್ಬಂದಿ ಜಯಶ್ರೀ ಮಾತನಾಡಿ ಬ್ಯಾಂಕಿನ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಗೆ ಕತಜ್ಞತೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಟಿ.ಜಿ.ರಾಜರಾಮ ಭಟ್, ವಾದಿರಾಜ ಶೆಟ್ಟಿ ಎಂ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್. ರಾಜು ಪೂಜಾರಿ, ಅಶೋಕ್ ಕುಮಾರ್ ಶೆಟ್ಟಿ ಹರಿಶ್ಚಂದ್ರ, ಕೆ.ಜೈರಾಜ್ ಬಿ. ರೈ ಉಪಸ್ಥಿತರಿದ್ದರು.
ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಮಹಾಪ್ರಬಂಧಕ ಅಶೋಕ್ ಕುಮಾರ್ ಕೆ. ವಂದಿಸಿದರು. ಸಹಾಯಕ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here