ದೋಳ್ಪಾಡಿ ಕುಕ್ಕುನಾಜೆಯಲ್ಲಿ ಮನೆಗೆ ಮರ ಬಿದ್ದು ಹಾನಿ

0

ಕಾಣಿಯೂರು: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಮರವೊಂದು ಮನೆಗೆ ಬಿದ್ದು ಹಾನಿಯಾದ ಘಟನೆ ಕಾಣಿಯೂರು ಸಮೀಪ ದೋಳ್ಪಾಡಿ ಎಂಬಲ್ಲಿ ನಡೆದಿದೆ. ದೋಳ್ಪಾಡಿ ಗ್ರಾಮದ ಕುಕ್ಕುನಾಜೆ ಆನಂದರವರ ಮನೆಗೆ ಮರ ಬಿದ್ದು ಹಾನಿಯಾಗಿದ್ದು, ಗೋಡೆ ಬಿರುಕುಗೊಂಡಿದೆ. ಅಲ್ಲದೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಘಟನಾ ಸ್ಥಳಕ್ಕೆ ಗ್ರಾಮಕರಣಿಕ ಹರೀಶ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪರವ ದೋಳ್ಪಾಡಿ, ದೇವಿಪ್ರಸಾದ್ ದೋಳ್ಪಾಡಿ, ಗ್ರಾಮ ಸಹಾಯಕ ವಾಸುದೇವ ನಾಯ್ಕ್ ತೋಟ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here