18 ದಿನದ ಹಿಂದೆ ನಡೆದ ಅಪಘಾತ-ಪ್ರಕರಣ ದಾಖಲು

0

ಪುತ್ತೂರು: 18 ದಿನದ ಹಿಂದೆ ಪುತ್ತೂರು ಮುಖ್ಯರಸ್ತೆಯಲ್ಲಿ ನಡೆದ ಬೈಕ್ ಮತ್ತು ಸ್ಕೂಟರ್ ನಡುವಿನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಗಾಯಾಳುವಿನ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜೂ.20ರಂದು ಪುತ್ತೂರು ಬಸ್ ನಿಲ್ದಾಣದ ಸಮೀಪದ ಮುಖ್ಯರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿತ್ತು. ಈ ಅಪಘಾತ ಪ್ರಕರಣದಲ್ಲಿ ಬೈಕ್ ಸವಾರ ನೆಕ್ಕಿಲಾಡಿ ತಾಳೆಹಿತ್ಲು ನಿವಾಸಿ ಶಿವಪ್ಪ(45ವ)ರವರು ಗಾಯಗೊಂಡಿದ್ದು, ಅವರು ಪುತ್ತೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ತೆರಳಿದ್ದರು. ಆದರೆ ಗಾಯ ಉಲ್ಬಣಗೊಂಡು ಅವರು ಮಂಗಳೂರು ದೇಳಕಟ್ಟೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಪಟ್ಟಿದ್ದರು. ಇದೀಗ ಗಾಯಾಳು ಶಿವಪ್ಪ ಅವರು ನೀಡಿದ ದೂರಿನಂತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here