ಪುತ್ತೂರು: 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಅಲೆಮಾರಿ ವಿದ್ಯಾರ್ಥಿಗಳು, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿಗೆ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜು.15ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.