ಪುಣಚ: ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿ ಮೃತ್ಯು

0

ಪುಣಚ: ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ( 51ವ.) ಎಂಬವರು ಮೃತಪಟ್ಟವರು.‌

ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ನೀರು ಹರಿಯುವ ಚರಂಡಿಗೆ ಹಾಕಿರುವ ಕಾಲುಸಂಕವನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕವುಚಿ ಬಿದ್ದು ಮೇಲೆ ಏಳಲು ಆಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here