





ಪುತ್ತೂರು : ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಬನಾರಿ ಎಂಬಲ್ಲಿ ಪಿಕಪ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದು ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ಶುಂಠಿ ಪಲಿಕೆ ನಿವಾಸಿ ಅಬೂಬಕರ್ ಮುಸ್ಲಿಯಾರ್ (73 )ಅಪಘಾತದಲ್ಲಿ ಮೃತಪಟ್ಟವರು. ಅವರ ಪತ್ನಿ ಬಿಪಾತುಮ್ಮ ( 60 ) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಂಚಾರಿ ಠಾಣೆ ಪೋಲಿಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.







            






