ಜೈನಮುನಿಗಳ ಹತ್ಯೆ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ- ಸರಕಾರಕ್ಕೆ ಶಾಸಕರ ಆಗ್ರಹ

0

ಪುತ್ತೂರು: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಅಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿಗಳನ್ನು ಹತ್ಯೆ ಮಾಡಿದ ಕೃತ್ಯ ಅತ್ಯಂತ ಖಂಡನೀಯ ಮತ್ತು ಅಮಾನವೀಯತೆಯಿಂದ ಕೂಡಿದ್ದು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರಕ್ಕೆ ಮನವಿ ಮಾಡಿದ್ದಾರೆ.


ಸರಕಾರ ಈಗಾಗಲೇ ಈ ಕೊಲೆ ಕೃತ್ಯದ ತನಿಖೆಗೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸದಾ ಶಾಂತಿಯನ್ನೇ ಬಯಸುವ ಮತ್ತು ಸಮಾಜದಲ್ಲಿ ಸೋದರತೆಯ , ಸೌಹಾರ್ದತೆಯ ಪ್ರತಿಬಿಂಬವಾಗಿರುವ ಜೈನ ಮುನಿಗಳ ಹತ್ಯೆಯನ್ನು ಸಮಾಜ ಸಹಿಸುವುದಿಲ್ಲ. ಶಾಂತಿಪ್ರಿಯ ಸಮುದಾಯದ ಮುನಿಗಳ ಹತ್ಯೆ ಕೃತ್ಯ ಘೋರವಾಗಿದೆ. ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶಾಸಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here