ಇಚ್ಲಂಪಾಡಿ: ಹೊಳೆನೀರಿಗೆ ಬಿದ್ದು ಕೃಷಿಕ ಕೃಷ್ಣಪ್ಪ ಗೌಡ ಮೃತ್ಯು

0

ನೆಲ್ಯಾಡಿ: ಹೊಳೆನೀರಿಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) (60ವ.)ಮೃತಪಟ್ಟವರಾಗಿದ್ದಾರೆ. ಕೃಷ್ಣಪ್ಪ ಗೌಡರವರು ಜು.9ರಂದು ಮಧ್ಯಾಹ್ನ ಇಚ್ಲಂಪಾಡಿಯ ಕೊಕ್ಕೊ ಕಾಡಿನ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದ ವೇಳೆ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೃಷ್ಣಪ್ಪ ಗೌಡರಿಗಾಗಿ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಜು.10ರಂದು ಬೆಳಿಗ್ಗೆ ಹೊಳೆಬದಿ ಮತ್ತೆ ಹುಡುಕಾಟ ನಡೆಸಿದಾಗ ಸದ್ರಿ ಹೊಳೆಯು ಗುಂಡ್ಯಹೊಳೆ ಸೇರುವಲ್ಲಿ ಕೃಷ್ಣಪ್ಪ ಗೌಡರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here