





ಪುತ್ತೂರು: ಪುತ್ತೂರು ತಾಲೂಕು, ಕರ್ನಾಟಕ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ದರ್ಬೆ, ಪುತ್ತೂರು ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ – ಮಾಹಿತಿ ಕಾರ್ಯಾಗಾರವು ಜು.12ರಂದು ಕಾಲೇಜಿನ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ತಿಲಕ್ ರೈ ಕುತ್ಯಾಡಿ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಸಂತ ಫಿಲೋಮಿನ ಕಾಲೇಜಿನ ಕ್ಯಾಂಪಸ್ ಡೈರೆಕ್ಟರ್ ರೆ. ಫಾ ಸ್ಟಾನಿ ಪಿಂಟೋ, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಮತ್ತು ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ. ಶಿವಚರಣ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.










