ನಿಡ್ಪಳ್ಳಿ ಗ್ರಾ.ಪಂ ಉಪ ಚುನಾವಣೆ- ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ

0

ಪುತ್ತೂರು: ನಿಡ್ಪಳ್ಳಿ ಗ್ರಾ.ಪಂನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23 ರಂದು ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ ಪ್ರಭುರವರು ಜು.11ರಂದು ನಾಮಪತ್ರ ಸಲ್ಲಿಸಿದರು.


ಮಾಜಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷ ಆಶಾ ತಿಮ್ಮಪ್ಪ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರವ ಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿ ಕುಮಾರ್ ರೈ ಬಾಲ್ಯೊಟ್ಟು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತಿಶ್ ಶಾಂತಿವನ, ಹರಿಪ್ರಸಾದ ಯಾಧವ್, ವಿಶ್ವನಾಥ ಮಚ್ಚಿಮಲೆ, ನಿಡ್ಪಳ್ಳಿ ಗ್ರಾ.ಪಂ ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರಾಮದಾಸ್ ಬಂಟ್ವಾಳ, ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here