ರಾಮಕುಂಜ: ‘ಆಟಿ ಅಮಾಸೆದ ಪೊಲಬು’ಆಮಂತ್ರಣ ಪತ್ರ ಬಿಡುಗಡೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಹಾಗೂ ನೇತ್ರಾವತಿ ತುಳುಕೂಟ ರಾಮಕುಂಜ ಇದರ ಆಶ್ರಯದಲ್ಲಿ ಜು.17ರಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ‘ಆಟಿ ಅಮಾಸೆದ ಪೊಲಬು’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಜು.11ರಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಜು.17ರಂದು ಆಟಿ ಅಮಾವಾಸ್ಯೆ ಆಚರಣೆ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಆ ದಿನ ಬೆಳಿಗ್ಗೆ ೯ ಗಂಟೆಯಿಂದ ಪೋಷಕರಿಗೆ ಪಾಡ್ದನ, ಬೀಜ ಕುಟ್ಟುನು, ಚೆನ್ನೆಮಣೆ, ಸ್ಮರಣೆ ಶಕ್ತಿ, ರಸಪ್ರಶ್ನೆ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನ್ಯಾಯವಾದಿ ದುರ್ಗಾಪ್ರಸಾದ್ ರೈ ಕುಂಬ್ರ, ದೈವನರ್ತಕ ಕಿಟ್ಟು ಕಲ್ಲುಗುಡ್ಡೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಸಾಯಿರಾಂ, ಉಪಾಧ್ಯಕ್ಷೆ ಮೀನಾಕ್ಷಿ, ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಗಾಯತ್ರಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಲೋಹಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here