ಕುಡಿಪಾಡಿ ಸರಕಾರಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

0

ಪುತ್ತೂರು: ಕುಡಿಪಾಡಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಪುತ್ತೂರು ಉಪ ವಿಭಾಗ, ಪುತ್ತೂರು ವಲಯ ಹಾಗೂ ಕುಡಿಪಾಡಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಜಂಟಿ ಆಶ್ರಯದಲ್ಲಿ ಜು.11ರಂದು ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಉಪ ವಲಯ ಅರಣ್ಯಾಧಿಕಾರಿಯಾಗಿರುವ ಶಿವಾನಂದ ಆಚಾರ್ಯರವರು ಮಾತನಾಡಿ, ಮಕ್ಕಳಿಗೆ ಪರಿಸರ ಮತ್ತು ಮಾನವ ಸಂಬಂಧ, ಪರಿಸರ ಮತ್ತು ಅರಣ್ಯದ ಬಗ್ಗೆ ತಿಳುವಳಿಕೆ, ಅರಣ್ಯದಿಂದಾಗುವ ಪ್ರಯೋಜನಗಳು ಹಾಗೂ ನಾವು ಆಚರಿಸುವ ಎಲ್ಲಾ ಹಬ್ಬಗಳಲ್ಲಿ ಒಂದೊಂದು ಗಿಡ ನೆಟ್ಟು ಪೋಷಿಸಿ ಪರಿಸರವನ್ನು ರಕ್ಷಿಸಬೇಕು ಎಂದರು.

ಸಭಾಧ್ಯಕ್ಷತೆಯನ್ನು ಕುಡಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ರೇಖಾ ಬಟ್ರುಪಾಡಿ ವಹಿಸಿದ್ದರು. ಬೀಟ್ ಅರಣ್ಯಾಧಿಕಾರಿ ಭವ್ಯ, ಕುಡಿಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರ ಬಾನೊಟ್ಟು, ಹಾರಾಡಿ ಕ್ಲಸ್ಟರ್‌ನ ಸಿ.ಆರ್.ಪಿ. ಪ್ರಸಾದ್ ಕೆ.ವಿ.ಎಲ್.ಎನ್., ಕುಡಿಪಾಡಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ದಿನೇಶ್ ಗೌಡ ಗೋಮುಖ, ಶಾಲಾ ಪ್ರೌಢ ಶಾಲಾ ಸಹ ಶಿಕ್ಷಕಿ ಆರತಿ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮಕ್ಕಳು ಪ್ರಾರ್ಥಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್‌ರವರು ಸ್ವಾಗತಿಸಿ, ಗೌರವ ಶಿಕ್ಷಕಿ ಮಂಜುಳಾ ವಂದಿಸಿದರು. ಸಹಶಿಕ್ಷಕ ಗಣೇಶ್ ಕಾರ‍್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಸಹಕರಿಸಿದರು. ಎಸ್.ಡಿ.ಎಂ.ಸಿ. ಗೌರವಾಧ್ಯಕ್ಷ ರಾಮ ಜೋಯಿಷ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಸುನಿತಾ ಹಾಗೂ ಎಸ್.ಡಿ.ಎಂ.ಸಿ.ಯ ಎಲ್ಲಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here