ರಾಷ್ಟ್ರೀಯ ಲೋಕ್ ಅದಾಲತ್

0

* ೧೯,೬೬೬ ಪ್ರಕರಣಗಳು ಇತ್ಯರ್ಥ
* ೨೨,೧೯,೩೫,೭೬೫ಕೋಟಿ ರೂ.ಪರಿಹಾರ ವಸೂಲು

ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ `ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮ ಜು.8ರಂದು ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 50 ಬೈಠಕ್‌ಗಳು ನಡೆದವು. ಅದಾಲತ್‌ನಲ್ಲಿ ಒಟ್ಟು 24,303 ಪ್ರಕರಣಗಳು ಪರಿಗಣಿಸಲಾಗಿತ್ತು. ಅದರಲ್ಲಿ 19,666 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 22,19,35,765 ಕೋಟಿ ರೂ.ಗಳ ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಅದಾಲತ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here