ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು ನಾಮಪತ್ರ – ನಿಡ್ಪಳ್ಳಿ ಗ್ರಾ.ಪಂ. ಉಪ ಚುನಾವಣೆ

0

ಪುತ್ತೂರು: ನಿಡ್ಪಳ್ಳಿ ಗ್ರಾ.ಪಂ.ನ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಉರಗ ತಜ್ಞ ಚಂದ್ರಶೇಖರ ಪ್ರಭುರವರು ಜು.11ರಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರುರವರು, ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ, ನಿಡ್ಪಳ್ಳಿ ಗ್ರಾ.ಪಂ.ನ ಸದಸ್ಯರಾಗಿದ್ದ ಮುರಳಿಕೃಷ್ಣ ಭಟ್‌ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪಕ್ಷದ ಹಿರಿಯ ಕಾರ್ಯಕರ್ತ ಉರಗತಜ್ಞ, ಜಲ ಅನ್ವೇಷಕ ಹಾಗೂ ಪಕ್ಷಕ್ಕಾಗಿ ದುಡಿದಿರುವ ಚಂದ್ರಶೇಖರ ಪ್ರಭುರವರು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಿಡ್ಪಳ್ಳಿ ವಾರ್ಡ್‌ನ ಜನತೆ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು. ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರಕಾರ ಜನಹಿತದೊಂದಿಗೆ ಮಾದರಿ ಆಡಳಿತ ನೀಡುತ್ತಿದ್ದು, ಅದೇ ಮಾದರಿಯಲ್ಲಿ ನಿಡ್ಪಳ್ಳಿಯಲ್ಲಿಯೂ ಆಡಳಿತ ನಡೆಸಲು ನಿಡ್ಪಳ್ಳಿ ವಾರ್ಡ್‌ನ ಜನತೆ ಚಂದ್ರಶೇಖರ ಪ್ರಭುರವರಿಗೆ ಮತ ನೀಡಿ ಗೆಲ್ಲಿಸುವಂತೆ ವಿನಂತಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರ ಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿ ಕುಮಾರ್ ರೈ ಬಾಲ್ಯೊಟ್ಟು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತಿಶ್ ಶಾಂತಿವನ, ಹರಿಪ್ರಸಾದ ಯಾಧವ್, ವಿಶ್ವನಾಥ ಮಚ್ಚಿಮಲೆ, ನಿಡ್ಪಳ್ಳಿ ಗ್ರಾ.ಪಂ ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ಸಂತೋಷ್ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here