ಆರ್ಯಾಪು ಗ್ರಾ.ಪಂ ಉಪ ಚುನಾವಣೆ- ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪುರುಷೋತ್ತಮ ಪ್ರಭು ನಾಮಪತ್ರ

0

ಪುತ್ತೂರು: ಆರ್ಯಾಪು ಗ್ರಾ.ಪಂಗೆ ಜು.26 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ದೇವಸ್ಯ ಅಬ್ಬುಗದ್ದೆ ಜು.12ರಂದು ನಾಮಪತ್ರ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಉದ್ಯಮಿ ಶಿವರಾಮ ಆಳ್ವ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಹಾಬಲ ರೈ ವಳತ್ತಡ್ಕ, ನಗರ ಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಯಂಗ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಂಜಿತ್ ಬಂಗೇರ, ಚೆನ್ನಪ್ಪ ಗೌಡ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here