ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲ್, ದಾಖಲೆ ಪತ್ರಗಳನ್ನು ತಯಾರಿ ಪ್ರಕರಣ ಆರೋಪಿ ವಿಶ್ವನಾಥ್ ಬಿ.ವಿ ಅವರು ಪೊಲೀಸ್ ಕಸ್ಟಡಿಗೆ

0

ಪುತ್ತೂರು: ಸ್ಥಳೀಯ ಗ್ರಾ.ಪಂ.ಗಳು ಮತ್ತು ನಗರಸಭೆ ನಕಲಿ ಸೀಲುಗಳು, ರಬ್ಬರ್ ಸ್ಟಾಂಪ್, ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ನೀಡುತ್ತಿದ್ದ ಪ್ರಕರಣದ ಆರೋಪಿ ವಿಶ್ವನಾಥ್ ಬಿ.ವಿ ಅವರನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ನೀಡಿದ ದೂರಿನಂತೆ ಅವರ ನೇತೃತ್ವದಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಪಡೀಲ್‌ನ ಎಂ.ಎಸ್ ಕಾಂಪ್ಲೆಕ್ಸ್‌ನಲ್ಲಿರುವ ಬಿ.ಬಿ ಇಲೆಕ್ಟ್ರಿಕಲ್ಸ್ ಆಂಡ್ ಪ್ಲಂಬರ‍್ಸ್ ಕಚೇರಿಗೆ ದಾಳಿ ನಡೆಸಿದಾಗ ಗ್ರಾ.ಪಂ.ಗಳು ಮತ್ತು ನಗರಸಭೆ ನಕಲಿ ಸೀಲುಗಳು, ರಬ್ಬರ್ ಸ್ಟಾಂಪ್, ದಾಖಲೆ ಪತ್ರಗಳು ಬೆಳಕಿಗೆ ಬಂದಿತ್ತು. ವಿಶ್ವನಾಥ ಅವರು ನಕಲಿ ದಾಖಲೆ ಸೃಷ್ಟಿಸಿ ಸಾರ್ವಜನಿಕರಿಗೆ ನೀಡುತ್ತಿರುವ ಕುರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು, ಕಚೇರಿಯಲ್ಲಿದ್ದ ನಕಲಿ ಸೀಲು, ದಾಖಲೆಗಳನ್ನು ವಶಕ್ಕೆ ಪಡೆದು ಕೊಂಡಿದ್ದರು. ಜು.12ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಸಂದರ್ಭ ಆರೋಪಿಯ ಹೆಚ್ಚಿನ ವಿಚಾರಣೆಗೆ ಪೊಲೀಸರು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಮನವಿ ಮಾಡಿದ್ದರು. ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

LEAVE A REPLY

Please enter your comment!
Please enter your name here