ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳನ್ನು ಉಪಯೋಗಿಸಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸ್.ಐ.ರಾಜೇಶ್.ಕೆ.ವಿ ಹಾಗೂ ಸಿಬ್ಬಂದಿಗಳ ತಂಡ
ಕೆ. ಶೇಖರ (46 ವ), ಎಸ್. ಮುಸ್ತಾ-(34 ವ), ಶ್ರೀನಾಥ(30 ವ), ಕೆ. ರಮೇಶ(48 ವ) ಮತ್ತು ಎಂ.ಎ. ಅಬ್ದುಲ್ ಲತೀಫ್(47ವ) ಎಂಬವರನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಉಪಯೋಗಿಸಿದ ಇಸ್ಪೀಟ್ ಎಲೆಗಳನ್ನು ಹಾಗೂ ಇತರೆ ಸೊತ್ತುಗಳನ್ನು ಹಾಗೂ ರೂ 6680/- ನಗದು ಹಣವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 93/2023 ಕಲಂ:87 ಕೆ.ಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.