ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಬಿಲ್ಲವ ನಗರ ಸಮಿತಿಯ ಆಶ್ರಯದಲ್ಲಿ ಜು.15 ರಂದು ಅಪರಾಹ್ನ ಪುತ್ತೂರು-ಬಪ್ಪಳಿಗೆ ಬಿಲ್ಲವ ಸಂಘದ ಸಭಾಭವನದಲ್ಲಿ ನಡೆಯುವ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ ಹಾಗೂ ಎಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಬಿಲ್ಲವ ನಗರ ಸಮಿತಿ ಅಧ್ಯಕ್ಷ ಅವಿನಾಶ್ ಹಾರಾಡಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ, ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಮುಕ್ವೆ ಹಾಗೂ ಡಾ.ಸದಾನಂದ ಕುಂದರ್, ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ನಾರಾಯಣ ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಬಿಲ್ಲವ ನಗರ ವಲಯ ಸಂಚಾಲಕ ಕಿರಣ್ ಕುಮಾರ್, ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷ ಉಮೇಶ್ ಬಾಯಾರ್ ರವರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರು ನಗರಸಭೆ ವ್ಯಾಪ್ತಿಗೊಳಪಟ್ಟ ಬಿಲ್ಲವ ಸಮುದಾಯದ ಎಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ. ಉಚಿತ ಪುಸ್ತಕ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪೋಷಕರೊಂದಿಗೆ ಬರತಕ್ಕದ್ದು. ವಿದ್ಯಾರ್ಥಿಗಳು ಹಾಜರಾಗದಿದ್ದರೆ ಪುಸ್ತಕ ಮತ್ತು ಪ್ರತಿಭಾ ಪುರಸ್ಕಾರ ಮಾಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ 9108750499, 9740553222 ನಂಬರಿಗೆ ಸಂಪರ್ಕಿಸಬಹುದಾಗಿ ಎಂದು ಬಿಲ್ಲವ ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.