ಜು.16 ರಂದು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಬೃಹತ್ ಆರೋಗ್ಯ ತಪಾಸಣೆ-ರಕ್ತದಾನ ಶಿಬಿರ

0

ವಿಟ್ಲ: ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವ 2023ರ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ., ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ಯುವ ಸೇವಾ ಬಳಗ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು, ಒನ್‌ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್, ಬೆಂಗಳೂರು, ನೇತ್ರಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್, ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆಯುಷ್ ಇಲಾಖೆ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಮಂಗಳೂರು ಸಹಯೋಗದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣೆ – ಬೃಹತ್ ರಕ್ತದಾನ ಶಿಬಿರ – ಆಯುರ್ವೇದಿಕ್ ಆರೋಗ್ಯ ತಪಾಸಣೆ – ಚಿಕಿತ್ಸಾ ಶಿಬಿರವು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಜು.16 ರಂದು ನಡೆಯಲಿದೆ. ಬೆಳಿಗ್ಗೆ ಗಂಟೆ 6.30ಕ್ಕೆ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ವಿಕಲಚೇತನರನ್ನು ಗುರುತಿಸಿ ಗುರುತಿನ ಕಾರ್ಡು ವಿತರಣೆಯನ್ನು (ಅರ್ಹರು 2 ಫೊಟೋ, ಆಧಾರ್ ಪ್ರತಿ ತರಬೇಕು) ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here