ಜು.15: `ಏಕರೂಪ ನಾಗರಿಕ ಸಂಹಿತೆ’ – ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

0

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಿಂದ ಭಾರತದಲ್ಲಿ `ಏಕರೂಪ ನಾಗರಿಕ ಸಂಹಿತೆ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವು ಶನಿವಾರ ಜು.15ರಂದು ನಡೆಯಲಿದೆ. ಒಂದು ದಿನದ ಈ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕೊಚ್ಚಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಡಾ| ಕೆ. ಸಿ. ಸನ್ನಿ ಉದ್ಘಾಟಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ಪುತ್ತೂರಿನ ಹಿರಿಯ ನ್ಯಾಯವಾದಿಗಳಾದ ಎಂ. ರಾಮ್ ಮೋಹನ್ ರಾವ್, ಹೈಕೋರ್ಟ್ ವಕೀಲ ಅರುಣ್ ಶ್ಯಾಮ್, ಹಿರಿಯ ಕಾನೂನು ಪ್ರಾಧ್ಯಾಪಕರಾದ ಡಾ. ಸಾಯಿರಾಂ ಭಟ್ ಹಾಗೂ ಡಾ| ಕೆ. ಆರ್. ಐತಾಳ್ ‘ಏಕರೂಪ ನಾಗರಿಕ ಸಂಹಿತೆ’ ಕುರಿತಾದ ವಿವಿಧ ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.


ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಕುರಿತಾಗಿ ಅಭಿಪ್ರಾಯಗಳನ್ನು ನೀಡಲು ಭಾರತದ ಕಾನೂನು ಆಯೋಗವು ಅವಕಾಶವನ್ನು ನೀಡಿರುತ್ತದೆ. ಈ ಹಿನ್ನಲೆಯಲ್ಲಿ ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸುತ್ತಿರುವ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯವು ಸಮಾಜದ ಪ್ರಜ್ಞಾವಂತ ನಾಗರಿಕರಿಗೆ ಭಾರತದಲ್ಲಿ ಸಮಾನ ನೀತಿ ಸಂಹಿತೆಯ ಕುರಿತು ಮಾಹಿತಿ ನೀಡುವ ಹಿನ್ನಲೆಯಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಅದರಲ್ಲಿ ಭಾಗವಹಿಸಿ, ಅಲ್ಲಿ ನಡೆಯಲಿರುವ ಚರ್ಚೆಯಲ್ಲಿ ನಾಗರಿಕರಿಗೆ ಅಮೂಲ್ಯ ಸಲಹೆಯನ್ನು ನೀಡಲು ಹಾಗೂ ತಮ್ಮಲ್ಲಿರುವ ಸಂದೇಹಗಳನ್ನು ಬಗೆಹರಿಸಿಕೊಳ್ಳುವ ಅವಕಾಶವಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here