ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಾಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಹಿನ್ನೆಯಲ್ಲಿ 48ದಿನಗಳ ಕಾಲ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಗೆ ಜು.16ರಂದು ಚಾಲನೆ ದೊರೆಯಲಿದೆ.
ಜು.16ರಂದು ಆರಂಭಗೊಂಡು ಮುಂದಿನ 48ದಿನಗಳ ವರೆಗೆ ಬೆಳಗ್ಗೆ 12 ತೆಂಗಿನಕಾಯಿ ಗಣಪತಿ ಯಾಗ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ ನಡೆಯಲಿದೆ. ಬಳಿಕ ಕನಕಧಾರಾ ಯಾಗ, ಸಾಮೂಹಿಕ ಕುಂಕುಮಾರ್ಚನೆ, ನಡೆದು ಮಧ್ಯಾಹ್ನ ಯಾಗದ ಪೂರ್ಣಾವತಿ, ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ 5 ಗಂಟೆಯಿಂದ ಭಜನಾ ಸಂಕೀರ್ತನೆ ನಡೆಯಲಿದೆ. ರಾತ್ರಿ ಶ್ರೀ ದುರ್ಗಾ ಪೂಜೆ, ಆಶ್ಲೇಷ ಬಲಿ, ಲಕ್ಷ್ಮಿ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.