ಕಾಂಚನ ಲಕ್ಷ್ಮೀನಾರಾಯಣ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

0

ನೆಲ್ಯಾಡಿ: ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.11ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು.


ಜನ ಸಂಖ್ಯಾಸ್ಫೋಟದ ಅರ್ಥ ಜನಸಂಖ್ಯೆ ಏರಿಕೆಗೆ ಕಾರಣಗಳು ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶಗಳು ಇದರಿಂದ ಜನರು ಬಡತನದ ಸಮಸ್ಯೆಯನ್ನು ನಿರುದ್ಯೋಗ, ಶಿಕ್ಷಣದ ಕೊರತೆ, ವೈದ್ಯಕೀಯ ಕೊರತೆ, ಪೌಷ್ಠಿಕಾಂಶದ ಕೊರತೆ ಹಾಗೂ ದೇಶದ ರಾಷ್ಟ್ರೀಯ ಆದಾಯದ ಇಳಿಕೆ ಈ ಎಲ್ಲಾ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಈ ಎಲ್ಲಾ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಸಂಸ್ಥೆಯು 1989ರ ಜುಲೈ11 ರಂದು ಮೊದಲ ಬಾರಿಗೆ ಜನಸಂಖ್ಯಾ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ನಮ್ಮ ದೇಶದಲ್ಲಿ ಆಚರಣೆಯನ್ನು ಮಾಡಲಾಗುತ್ತದೆ. ಜನಸಂಖ್ಯಾ ನಿಯಂತ್ರಣಕ್ಕೆ ನಾವೆಲ್ಲರೂ ಒಟ್ಟಾಗಿ ಕೈ ಜೋಡಿಸಿ ಸರ್ಕಾರದ ನಿಯಮಗಳನ್ನು ಪಾಲಿಸೋಣ ಎಂದು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿಯನ್ನು ನೀಡಿದರು.
ಶಾಲಾ ಮುಖ್ಯಗುರುಗಳು ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here