ವಿಟ್ಲ: ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇಲ್ಲಿನ ಎಂ ಎಂ ಸಿ ಎ ಮತ್ತು ಎಂ ಬಿ ಎ ಎ ವಿದ್ಯಾರ್ಥಿಗಳಿಂದ ಕುಳ ಗ್ರಾಮ ವಿಕಾಸ ಯೋಜನೆಯಡಿ ಓಜಾಲ ಹಿ.ಪ್ರಾ ಶಾಲೆಯಲ್ಲಿ ದಾನೋತ್ಸವ ಕಾರ್ಯಕ್ರಮ ನಡೆಯಿತು.
ಓಜಾಲ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಿದಾನಂದ ಪೆಲತ್ತಿಂಜರವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ವತಿಯಿಂದ ಸುಮಾರು 18 ಸಾವಿರ ರೂಪಾಯಿ ಮೌಲ್ಯದ ವಿವಿಧ ವಸ್ತುಗಳನ್ನು ಸಂಸ್ಥೆಗೆ ಕೊಡುಗೆಯಾಗಿ ನೀಡಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಸತೀಶ್ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಸಂಜೀವ ಮಿತ್ತಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕುಳ ಗ್ರಾಮದ ಹೇಮಾಜೆ ನಿವಾಸಿ ನಾಟಿ ವೈದ್ಯರಾದ ಪೂವಪ್ಪ ಹೇಮಾಜೆರವರನ್ನು ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ವತಿಯಿಂದ ಸನ್ಮಾನಿಸಲಾಯಿತು.
ಡಾ. ಸೌಮ್ಯ ಏನ್ ಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ವಂದನಾ ಬಿ. ಎಸ್. ಸ್ವಾಗತಿಸಿದರು. ಡಾ. ರಾಬಿನ್ ಶಿಂದೆ ವಂದಿಸಿದರು. ಡಾ. ಸೀಮಾ ಎಸ್. ಕಾರ್ಯಕ್ರಮ ನಿರೂಪಿಸಿದರು.