ಆಲಂಕಾರು: ದ.ಕ ಜಿ.ಪ. ಉ.ಹಿ.ಪ್ರಾಥಮಿಕ ಶಾಲೆ ಗಂಡಿಬಾಗಿಲು ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಮಕ್ಕಳ ಪೋಷಕರಿಗೆ ಮಕ್ಕಳ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಕಡಬ ಅರಕ್ಷಕ ಠಾಣೆಯ ಕೊಯಿಲ ಬೀಟ್ ಪೋಲಿಸ್ ಹರೀಶ್ ರವರು ಫೋಕ್ಸೋ ಕಾಯ್ದೆ ಮಾಹಿತಿ ನೀಡಿದರು. ನಂತರ
ಮಕ್ಕಳು ಸಣ್ಣ ವಯಸ್ಸಿನಲ್ಲಿಯೇ ಕೆಲವು ದುಶ್ಚಟಕ್ಕೆ ಬಲಿಯಾಗದಂತೆ ಹಿರಿಯರು ಎಚ್ಚರಿಕೆ ವಹಿಸಬೇಕು ಹಾಗೂ ಮಕ್ಕಳ ರಕ್ಷಣೆಯ ಕುರಿತು ಮಾಹಿತಿ ನೀಡಿ ಅಪ್ರಾಪ್ತ ಮಕ್ಕಳ ಕೈಯಲ್ಲಿ ಪೋಷಕರು ಯಾವುದೇ ಕಾರಣಕ್ಕೂ ವಾಹನ ನೀಡಬೇಡಿ. ಈ ಬಗ್ಗೆ ನಿಗಾ ವಹಿಸುವಂತೆ ತಿಳಿಸಿ, ಮಕ್ಕಳು ಅಪರಿಚಿತ ವ್ಯಕ್ತಿ, ವಾಹನಗಳಲ್ಲಿ ತೆರಳುವಾಗ ಎಚ್ಚರ ವಹಿಸಬೇಕು. ಮಳೆಗಾಲದಲ್ಲಿ ಕಳ್ಳತನ ಪ್ರಕರಣ ಗಳ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿ, ಮನೆ ಮನೆ ವ್ಯಾಪಾರಿ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಬೇಕು, ಮನೆಯಲ್ಲಿ ಒಂಟಿಯಾಗಿ ಇರುವ ಮಹಿಳೆಯರು ಅಪರಿಚಿತ ವ್ಯಕ್ತಿಗಳ ಬಗ್ಗೆ ಜಾಗೃತರಾಗಿರಬೇಕೆಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಬುರವರು ವಹಿಸಿದ್ದರು. ಶಾಲಾ ಮುಖ್ಯಗುರು ಜನಾರ್ಧ ಗೌಡ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಯಸ್.ಡಿ.ಯಂ.ಸಿ ಉಪಾಧ್ಯಕ್ಷೆ ಸಪ್ನಾ ರೈ, ರಝಾಕ್ ಗಂಡಿಬಾಗಿಲುರವರು ವೇದಿಕೆ ಉಪಸ್ಥಿತರಿದ್ದರು.