ಮುಂಡೂರು ಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ

0

ಭಾಷಾ ಪ್ರೌಢಿಮೆ ಬೆಳೆಸಿಕೊಳ್ಳಲು ಯಕ್ಷಗಾನ ಸಹಕಾರಿ-ರಮೇಶ್ ಗೌಡ

ಪುತ್ತೂರು: ಯಕ್ಷಗಾನ ಕರಾವಳಿಯ ಗಂಡು ಕಲೆ, ಯಕ್ಷಗಾನ ಕಲಿಯುವುದರ ಮೂಲಕ ಭಾಷಾ ಪ್ರೌಢಿಮೆಯನ್ನು ಬೆಳೆಸಿಕೊಳ್ಳುವುದರ ಮೂಲಕ ಮಕ್ಕಳ ಸರ್ವಾಂಗೀಣ ವಿಕಸನ ಸಾಧ್ಯ ಎಂದು ಮುಂಡೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಹೇಳಿದರು. ಮುಂಡೂರು ಸ.ಉ.ಪ್ರಾ. ಶಾಲೆಯಲ್ಲಿ ಜು.15ರಂದು ನಡೆದ ಯಕ್ಷಗಾನ ತರಗತಿಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಕ್ಷಗಾನ ಗುರುಗಳಾದ ಉತ್ತಮ್ ಪಡ್ಪು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಯಾಗಿದ್ದ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಾಪಕರಾದ ಚಂದ್ರಶೇಖರ್ ಶುಭ ಹಾರೈಸಿದರು. ಮುಂಡೂರು ಶಾಲಾ ಮುಖ್ಯ ಗುರು ವಿಜಯ ಪಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿ ಶಶಿಕಲಾ ಟಿ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಬಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here