ಹಿರೇಬಂಡಾಡಿ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸರಕಾರಿ ಪ್ರೌಢಶಾಲೆ ಹಿರೆಬಂಡಾಡಿ ಇದರ ಸಹಯೋಗದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಿವಿಧ ಹಂತದ ಕ್ರೀಡಾ ಪಂದ್ಯಾಟಗಳ ದಿನಾಂಕ ನಿಗದಿ ಕಾರ್ಯಕ್ರಮ ಸಭೆ ಹಿರೇಬಂಡಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರು ತೋಟರವರ ದೀಪೋಜ್ವಲನೆ ಮಾಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡರವರ ವತಿಯಿಂದ ಕಳೆದ ವರ್ಷದ ಜಿಲ್ಲಾ, ತಾಲೂಕು ಹಾಗೂ ವಲಯ ಮಟ್ಟದ ಕ್ರೀಡಾಕೂಟ ಹಾಗೂ ವಿವಿಧ ಪಂದ್ಯಾಟಗಳನ್ನು ನಡೆಸಿಕೊಟ್ಟ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರನ್ನು ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ರವರು ಶುಭಹಾರೈಸಿದರು. ಸಭಾ ಕಾರ್ಯಕ್ರಮದ ನಂತರ ಪ್ರಸ್ತುತ ಸಾಲಿನ ವಿವಿಧ ಪಂದ್ಯಾಟಗಳ ಸ್ಥಳ ಹಾಗೂ ದಿನಾಂಕ ನಿಗದಿ ಕಾರ್ಯಕ್ರಮ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಶ್ರೀಧರ ಮಠಂದೂರು, ಪ್ರಸ್ತುತ ಸಾಲಿನ ಸದಸ್ಯರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಪುತ್ತೂರು ಹಾಗೂ ಕಡಬ ತಾಲೂಕಿನ ಶಿಕ್ಷಕರ ವಿವಿಧ ಸಂಘಗಳ ಅಧ್ಯಕ್ಷರುಗಳು, ಪುತ್ತೂರು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಶಿಕ್ಷಣ ಸಂಯೋಜಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಪುತ್ತೂರು ಹಾಗೂ ಕಡಬ ತಾಲೂಕಿನ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಣ ಇಲಾಖೆಯ, ಸಮನ್ವಯಾಧಿಕಾರಿಗಳು, ಶಿಕ್ಷಣ-ಸಂಯೋಜಕರು ಬಿ.ಆರ್.ಪಿ,ಸಿ .ಆರ್.ಪಿ. ಎ.ಡಿ.ಎಂ.ಎಂ.ಎಸ್,ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಹರಿಕಿರಣ್ ಕೆ., ಸ್ವಾಗತಿಸಿ ಗೌರವಾರ್ಪಣೆ ನೆರವೇರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಬಿ., ವಂದಿಸಿದರು. ವಿಜ್ಞಾನ ಶಿಕ್ಷಕ ಮನೋಹರ ಎಂ., ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಲಲಿತ ಕೆ, ವಸಂತಕುಮಾರ್ ಪಿ. ಅತಿಥಿ ಶಿಕ್ಷಕಿಯರಾದ ಶ್ವೇತಕುಮಾರಿ, ಆರತಿ ವೈ ಹಾಗೂ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.