ಸವಣೂರು : ನಶಾ ಮುಕ್ತ ಭಾರತ ಅಭಿಯಾನ ಉದ್ಘಾಟಿಸಿದ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್

0

ಸವಣೂರು : ಬೆಳ್ಳಾರೆ ಪೊಲೀಸ್‌ ಠಾಣೆ, ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ, ಸರಕಾರಿ ಪದವಿಪೂರ್ವ ಕಾಲೇಜು,ಮಕ್ಕಳ ಸುರಕ್ಷಾ ಸಮಿತಿ (ಪ್ರೌಢಶಾಲಾ ವಿಭಾಗ) ಸವಣೂರು ಇದರ ಸಹಯೋಗದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಸವಣೂರು ಸ.ಪ.ಪೂ.ಕಾಲೇಜಿನಲ್ಲಿ ಜು.20ರಂದು ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ನವೀನಚಂದ್ರ ಜೋಗಿ ಮಾತನಾಡಿದರು.

ವೇದಿಕೆಯಲ್ಲಿ ಬೆಳ್ಳಾರೆ ಠಾಣಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಹಾಸ್ ಆರ್,ಸವಣೂರು ಸರಕಾರಿ ಪದವಿಪೂರ್ವ ಕಾಲೇಜಿನ‌ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಕೆ.ಸವಣೂರು, ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು,ಸವಣೂರು ಪ.ಪೂ.ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ,ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ರಘು,ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.,ಕಾರ್ಯದರ್ಶಿ ಕೀರ್ತನ್ ಕೋಡಿಬೈಲು,ಮಾಜಿ ಅಧ್ಯಕ್ಷ ಸಚಿನ್ ಸವಣೂರು, ಮಾಜಿ ಕಾರ್ಯದರ್ಶಿ ರಾಜೇಶ್ ಇಡ್ಯಾಡಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here