ಬಿಜೆಪಿ ರಾಜ್ಯಾಧ್ಯಕ್ಷರಿಂದ ಮಂಡಲದ ಪದಾಧಿಕಾರಿಗಳ ಜೊತೆ ಟಿಫಿನ್ ಬೈಠೆಕ್

0

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜು.18ರಂದು ಬಿಜೆಪಿ ಮಂಡಲದ ಪದಾಧಿಕಾರಿಗಳ ಜೊತೆ ಟಿಫಿನ್ ಬೈಠಕ್ ನಡೆಸಿದರು.


ಈ ಸಂದರ್ಭ ಅವರು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ 9 ವರ್ಷಗಳ ಸಾಧನೆ ಬಗ್ಗೆ ಮಾತನಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಬಿಜೆಪಿ ಮಂಗಳೂರು ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಹಿರಿಯರಾದ ಎಸ್.ಅಪ್ಪಯ್ಯ ಮಣಿಯಾಣಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here