ಪುತ್ತೂರು:2020ರಲ್ಲಿ ನಗರಸಭೆಯ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ,ಬೆದರಿಕೆಯೊಡ್ಡಿರುವ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.
2020ರ ಸೆಪ್ಟೆಂಬರ್ನಲ್ಲಿ ಬನ್ನೂರು ಸಮೀಪ ನಗರಸಭೆಯ ಹಿರಿಯ ಆರೋಗ್ಯಾಧಿಕಾರಿ ರಾಮಚಂದ್ರ ಮತ್ತು ಸಿಬ್ಬಂದಿಗಳು ಕರ್ತವ್ಯ ನಿರತರಾಗಿದ್ದ ವೇಳೆ ಅವರಿಗೆ ಹಲ್ಲೆ ನಡೆಸಲು ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಇಸ್ಮಾಯಿಲ್, ನಿಝಾಮುದ್ದೀನ್ ಮತ್ತು ಅಬ್ದುಲ್ ರಝಾಕ್ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಆಗಿನ ಪೌರಾಯುಕ್ತೆ ರೂಪಾ ಶೆಟ್ಟಿಯವರು ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದರು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ ಮತ್ತು ಸಲೀನಾ ಪಿ.ಟಿ.ನೆಕ್ಕಿಲಾಡಿ ವಾದಿಸಿದ್ದರು.