ದಲಿತರ ಭೂಮಿ ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಗೆ ಅನುಮೋದನೆ

0

ಪ್ರಕರಣಗಳು ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂ ಕೋರ್ಟ್ ಎಲ್ಲೇ ಇರಲಿ, ಪೆಂಡಿಂಗ್ ಇದ್ದರೂ ಸಹ ಅವುಗಳಿಗೆ ಈ ಕಾಯ್ದೆ ಜಾರಿಯಾಗುತ್ತದೆ.ಯಾವುದಾದರೂ ಪ್ರಕರಣಗಳು ನ್ಯಾಯಸಮ್ಮತವಾಗಿ ವಿಲೇ ಆಗಿ ಹೋಗಿದ್ದರೆ ಅವು ಇದರ ವ್ಯಾಪ್ತಿಗೆ ಬರುವುದಿಲ್ಲ.ಆದರೆ ಈ ಕಾನೂನು ಜಾರಿಗೆ ಬಂದ ನಂತರ ಪೆಂಡಿಂಗ್ ಇರುವ ಕೇಸ್‌ಗಳಿಗೂ ಅನ್ವಯವಾಗುತ್ತದೆ-
ಕೃಷ್ಣ ಭೈರೇ ಗೌಡ, ಕಂದಾಯ ಸಚಿವರು

ಬೆಂಗಳೂರು:ಸರಕಾರದ ಅನುಮತಿ ಇಲ್ಲದೆ ಮಾರಾಟವಾದ ದಲಿತರ ಭೂಮಿಯನ್ನು ವಾಪಸ್ ಕೊಡಿಸುವ ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ)-2023ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆಯಿತು.

ವಿಧೇಯಕ ಮಂಡಿಸಿ ವಿವರಣೆ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, 1978ರಲ್ಲಿ ಈ ಕಾನೂನನ್ನು ಇದೇ ಸದನ ಮಂಜೂರು ಮಾಡಿದೆ.ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ಜನರಿಗೆ ಸರಕಾರದಿಂದ ಮಂಜೂರಾತಿಯಾಗಿರುವ ಜಮೀನುಗಳನ್ನು ಪರಭಾರೆ ಮಾಡಬೇಕಾದರೆ ಸರಕಾರದ ಅನುಮತಿ ತೆಗೆದುಕೊಂಡಿರಬೇಕು.ಒಂದು ವೇಳೆ ಅನುಮತಿಯಿಲ್ಲದೆ ಮಾರಾಟ ಮಾಡಿದ್ದರೆ ಅಂತಹ ಜಮೀನುಗಳನ್ನು ಮೂಲ ಮಂಜೂರುದಾರರಿಗೆ ಮತ್ತೆ ಜಮೀನಿನ ಹಕ್ಕನ್ನು ನೀಡಬೇಕು ಎಂದು ಕಾನೂನು ತಂದಿತ್ತು.

ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಇಂದಿರಾಗಾಂಧಿ ನೇತೃತ್ವದ ಸರಕಾರ, ದೇಶದಲ್ಲಿ ಬಡವರಾಗಿದ್ದ ದಲಿತರು ತಿಳುವಳಿಕೆಯ ಕೊರತೆಯಿಂದ ಅವರ ಜಮೀನುಗಳನ್ನು ಮಾರಾಟ ಮಾಡಿದರೆ ಸರಕಾರದ ಅನುಮತಿಯಿಲ್ಲದೆ ಬೇರೆಯವರು ಕೊಂಡುಕೊಳ್ಳುವುದನ್ನು ಕಡಿವಾಣ ಹಾಕಲು ಮುಂದಾಗಿದ್ದರು.ಅಂದು ದಲಿತರಿಗೆ ಇದ್ದ ಏಕೈಕ ಆಸ್ತಿ ಸರಕಾರ ಮಂಜೂರು ಮಾಡಿದ್ದ ಜಮೀನನ್ನು ಅವರಿಗೆ ಉಳಿಸಲು ಈ ಮಾದರಿ ಕಾನೂನನ್ನು ರಚನೆ ಮಾಡಿ ಎಲ್ಲ ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದರು.ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಮತ್ತು ಕಂದಾಯ ಸಚಿವ ಬಸವಲಿಂಗಪ್ಪ ಮಸೂದೆ ಮಂಡಿಸಿದರು.1978 ರಿಂದ ಈ ಕಾನೂನು ಜಾರಿಯಲ್ಲಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಈ ಕಾನೂನಿನ ಅನ್ವಯ, ನಮ್ಮ ಜಮೀನು ವಾಪಸ್ ಕೊಡಬೇಕೆಂದು ಪರಿಶಿಷ್ಟ ಜಾತಿಯ ಒಬ್ಬರು ದಾವೆ ಹೂಡಿದ್ದರು.ಆದರೆ ಸಹಾಯಕ ಆಯುಕ್ತರು ನಿಮ್ಮ ಜಮೀನು ಮಾರಿ ಬಹಳ ವರ್ಷಗಳಾಗಿವೆ ಹಾಗಾಗಿ ಈಗ ಕೇಳಲು ಬರುವುದಿಲ್ಲ ಎಂದು ತೀರ್ಪು ನೀಡಿದ್ದರು.ಕೊನೆಗೆ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.ಆಗ

LEAVE A REPLY

Please enter your comment!
Please enter your name here