ನಿಡ್ಪಳ್ಳಿ, ಆರ್ಯಾಪು ಗ್ರಾ.ಪಂ.ಉಪಚುನಾವಣೆ- ಜು.23ರಂದು ನಿಷೇಧಾಜ್ಞೆ ಜಾರಿ

0

ಶ‌ಸ್ತ್ರಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜು. 23ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆ ಹಿನ್ನೆಲೆಯಲ್ಲಿ, ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಉದ್ದೇಶದಿಂದ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಽಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್‌ನಲ್ಲಿ ಉಪ ಚುನಾವಣೆಗಳು ನಡೆಯಲಿವೆ.

ಪುತ್ತೂರು:ಜು.23ರಂದು ತಾಲೂಕಿನ ನಿಡ್ಪಳ್ಳಿ, ಆರ್ಯಾಪು ಸೇರಿದಂತೆ ದ.ಕ ಜಿಲ್ಲೆಯ ಕೆಲ ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳ ನೂರು ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಽಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಸೆಕ್ಷನ್ 144ರನ್ವಯ ಜುಲೈ 23ರ ಬೆಳಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ, ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಮತದಾನ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಆದೇಶಿಸಿದ್ದಾರೆ.

ಪುತ್ತೂರು ತಾಲೂಕು ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಹೊಸದಾಗಿ ಸದಸ್ಯರ ಆಯ್ಕೆಗೆ ಉಪಚುನಾವಣೆ ನಡೆಯಲಿದ್ದು ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.ಎರಡು ಸ್ಥಾನಗಳಿಗೆ ಒಟ್ಟು ಆರು ಮಂದಿ ಅಂತಿಮ ಕಣದಲ್ಲಿದ್ದಾರೆ.

ನಿಡ್ಪಳ್ಳಿ ಗ್ರಾ.ಪಂ.ನ ನಿಡ್ಪಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ.ಚಂದ್ರಶೇಖರ ಪ್ರಭು ಗೋಳಿತ್ತಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಸ್ಪರ್ಧಿಸುತ್ತಿದ್ದಾರೆ. ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ ಭಂಡಾರಿ ಗೆಣಸಿನಕುಮೇರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಬ್ಬುಗದ್ದೆ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಸ್ಪರ್ಧಾ ಕಣದಲ್ಲಿದ್ದಾರೆ.

ನಿಡ್ಪಳ್ಳಿ ಗ್ರಾ.ಪಂನ ನಿಡ್ಪಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ಮುರಳಿ ಭಟ್‌ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್ 2 ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ನಿವೃತ್ತ ಎಸ್.ಐ.ರುಕ್ಮಯ್ಯ ಮೂಲ್ಯ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here