ಪುತ್ತೂರು: ದಲಿತ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡುರವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ದಲಿತ ಸೇವಾ ಸಮಿತಿ ಕಾನೂನಾತ್ಮಕ ಹೋರಾಟ ಮಾಡಲಿದ್ದೇವೆ ಎಂದು ದ.ಕ ದಲಿತ ಸೇವಾ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಸಂಘಟನೆಯ ಹೋರಾಟದ ಮೂಲಕ 2006ರಿಂದಲೂ ಸಮಾಜ ಮುಖಿ ಕೆಲಸಗಳನ್ನು ನ್ಯಾಯಯುತವಾಗಿ ಮಾಡುತ್ತಾ ಬಂದಿದ್ದಾರೆ. ಆದರೆ ಇತ್ತೀಚೆಗೆ ಸೇಸಪ್ಪ ಬೆದ್ರಕಾಡು ಅವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರಕ್ಕೆ ಪ್ರಾಮಾಣಿಕ ದಲಿತ ವರ್ಗದವರು ಬಲಿಯಾಗದೆ ನ್ಯಾಯದ ಪರ ನಿಲ್ಲಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಆರೋಪಗಳನ್ನು ಕಾನೂನಾತ್ಮಕವಾಗಿ ಎದುರಿಸಲಿದ್ದೇವೆ. ಒಂದು ವೇಳೆ ನ್ಯಾಯ ಸಿಗದಿದ್ದಲ್ಲಿ ಹೋರಾಟದ ಮಾರ್ಗವನ್ನು ಬಳಸಿಕೊಳ್ಳಲಿದ್ದೇವೆ ಎಂದು ಅವರು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ದ.ಕ.ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ಸಂಘಟನಾ ಅಧ್ಯಕ್ಷ ಧನಂಜಯ ಬಲ್ನಾಡು, ಪುತ್ತೂರು ತಾಲೂಕು ಅಧ್ಯಕ್ಷ ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು, ಜಿಲ್ಲಾ ಉಪಾಧ್ಯಕ್ಷೆ ಯಾಮಿನಿ ಬೆಟ್ಟಂಪಾಡಿ ಉಪಸ್ಥಿತರಿದ್ದರು.