ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರುಈ ಬಾರಿ ನೆಕ್ಕಿಲಾಡಿಯಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ-7

0

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನೆಕ್ಕಿಲಾಡಿ, ಸತ್ಯ ಶಾಂತ ಪ್ರತಿಷ್ಠಾನ ಉಪ್ಪಿನಂಗಡಿ ಸಹಕಾರದಲ್ಲಿ,ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಸ.ಹಿ.ಪ್ರಾ.ಶಾಲೆ ನೆಕ್ಕಿಲಾಡಿಯಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದ 7ನೇ ಸರಣಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್ ಅವರು ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಜೀವ ನಾಯ್ಕ, ನೆಕ್ಕಿಲಾಡಿ ಸಿ.ಆರ್. ಪಿ ಮಹಮ್ಮದ್ ಅಶ್ರಫ್, ಹಿರಿಯ ಪತ್ರಕರ್ತ ಉದಯ್ ಕುಮಾರ್ ಯು.ಎಲ್ ಭಾಗವಹಿಸಲಿದ್ದಾರೆ. ಹಿರಿಯ ವೈದ್ಯರಾದ ಡಾ.ರಘು ಬೆಳ್ಳಿಪ್ಪಾಡಿ, ಹಿರಿಯ ಸಾಹಿತಿಗಳಾದ ದಿನಕರ ಇಂದಾಜೆ, ಸಾಹಿತಿ ಶಾಂತ ಕುಂಟಿನಿ, ಹಿರಿಯ ಯಕ್ಷಗಾನ ಕಲಾವಿದ ಕಲಾವಿದರಾದ ಕುಂಬ್ಳೆ ಶ್ರೀಧರ ರಾವ್, ಸಮಾಜ ಸೇವಕರಾದ ಜತೀoದ್ರ ಶೆಟ್ಟಿ ಇವರುಗಳಿಗೆ ಕರುಣಾಕರ ಸುವರ್ಣ ಅವರು ಅಭಿನಂದಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತ್ಯಕ್ಕೆ ನೆಕ್ಕಿಲಾಡಿ ಗ್ರಾಮದ ಕೊಡುಗೆ ಎಂಬ ವಿಷಯದಲ್ಲಿ ಉಪನ್ಯಾಸವನ್ನು ಶಾಂತ ಕುಂಟಿನಿ ನೀಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಗಾಗಿ ಬಾಲ ಕವಿಗೋಷ್ಠಿ, ಬಾಲಕಥಾಗೋಷ್ಠಿ, ಯುವಕವಿಗೋಷ್ಠಿ, ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here