ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಗೆ ನೂತನ ಪದಾಽಕಾರಿಗಳ ಆಯ್ಕೆ ನಡೆದಿದೆ.ಜಿಲ್ಲಾ ನೂತನ ಅಧ್ಯಕ್ಷರಾಗಿ ಸುಧಾಕರ ರೈ ಬೋಳಂತೂರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣಪ್ರಕಾಶ್ ನೆಲ್ಲಿತ್ತಿಮಾರು, ಮಹಿಳಾ ಪ್ರಮುಖ್ ಆಗಿ ಶ್ರೀಮತಿ ಸುಭದ್ರ ರಾವ್ ಪೆರ್ಮಂಕಿ ಮಂಗಳೂರು ಮತ್ತು ಖಜಾಂಚಿಯಾಗಿ ಕೆ.ಸುಬ್ರಹ್ಮಣ್ಯ ಭಟ್ ಉಳ್ಳಾಲ ಆಯ್ಕೆಯಾಗಿದ್ದಾರೆ.
ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಹಕಾರ ಭಾರತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಸಹಕಾರ ಭಾರತಿಯ ರಾಜ್ಯಾಧ್ಯಕ್ಷರಾಗಿರುವ ಮಾಜಿ ಶಾಸಕ ರಾಜಶೇಖರ ಶೀಲವಂತ, ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್‌ದಾಸ್ ನಾಯಕ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಸತೀಶ್ಚಂದ್ರ ಎಸ್.ಆರ್.,ರಾಜ್ಯ ಕಾರ್ಯದರ್ಶಿ ಕೃಷ್ಣಪ್ರಸಾದ್ ಮಡ್ತಿಲ,ಮೈಸೂರು ವಿಭಾಗ ಸಂಘಟನಾ ಕಾರ್ಯದರ್ಶಿ ಮೋಹನ್ ಕುಂಬ್ಲೇಕರ್,ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣ ಕೊಂಪದವು ಇವರ ಉಪಸ್ಥಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.
ನೂತನ ಅಧ್ಯಕ್ಷ ಸುಧಾಕರ್ ರೈ ಬೋಳಂತೂರು ಇವರು ಬಂಟ್ವಾಳ ತಾಲೂಕು ಸಹಕಾರ ಭಾರತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದು, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ,ಬೋಳಂತೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಧಾನ ಕಾರ್ಯದರ್ಶಿ ನಾರಾಯಣಪ್ರಕಾಶ್ ನೆಲ್ಲಿತ್ತಿಮಾರು ಇವರು ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ, ಪಾಣಾಜೆ ರಣಮಂಗಲ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ, ಪಾಣಾಜೆ ರೈತರ ಸಹಕಾರಿ ಸಂಘದ ನಿರ್ದೇಶಕರಾಗಿ, ಭಾರತೀಯ ಮಜ್ದೂರ್ ಸಂಘದ ತಾಲೂಕು ಅಧ್ಯಕ್ಷರಾಗಿ, ಪಾಣಾಜೆ ಗ್ರಾ.ಪಂ ಸದಸ್ಯರಾಗಿ,ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದವರು.ಜಿಲ್ಲಾ ಸಹಕಾರ ಭಾರತಿ ಸದಸ್ಯರಾಗಿರುವ ಇವರು ಎರಡನೇ ಬಾರಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಹಿಳಾ ಪ್ರಮುಖ್ ಶ್ರೀಮತಿ ಸುಭದ್ರಾ ರಾವ್ ಪೆರ್ಮಂಕಿ ಇವರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಪೆರ್ಮಂಕಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.